
ಉಕ್ರೇನ್ ರಾಜಧಾನಿ ಕೀವ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ರಷ್ಯಾ ನಡೆಸಿದ ಡ್ರೋನ್ ಹಾಗೂ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯಲ್ಲಿ 17 ಮಂದಿ ಮೃತಪಟ್ಟಿದ್ದಾರೆ.
ಈ ಭೀಕರ ದಾಳಿಯಲ್ಲಿ 44ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಮಿತ್ರರಾಷ್ಟ್ರಗಳಿಗೆ ತುರ್ತು ವಾಯು ರಕ್ಷಣಾ ನೆರವಿಗಾಗಿ ಮನವಿ ಮಾಡಿದ್ದಾರೆ.
ಪೇಟ್ರಿಯಾಟ್ ಪ್ರತಿಬಂಧಕ ಕ್ಷಿಪಣಿಗಳ ಕೊರತೆಯಿಂದಾಗಿ ರಷ್ಯಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಝೆಲೆನ್‌ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.