
ಕಟಪಾಡಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘವು ಆಗಸ್ಟ್ 23ರಂದು ಉಡುಪಿ ಜಿಲ್ಲಾ ಮಟ್ಟದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ.
ಈ ಸ್ಪರ್ಧೆಯು ಪ್ರಾಥಮಿಕ, ಪ್ರೌಢಶಾಲಾ ಮತ್ತು ಕಾಲೇಜು ವಿಭಾಗಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ಆಗಸ್ಟ್ 20ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆಯ ಗುರುತಿನ ಚೀಟಿ ಅಥವಾ ಶಿಕ್ಷಕರ ಪತ್ರವನ್ನು ತರಬೇಕು ಎಂದು ಸಂಘದ ಕಾರ್ಯದರ್ಶಿ ಸುಧೀರ್ ಡಿ. ಬಂಗೇರ ತಿಳಿಸಿದ್ದಾರೆ.