
ಖಾಸಗಿ ಶಾಲೆಗಳಿಗೆ ಮಾನ್ಯತೆ ನೀಡುವ ವೇಳೆ ಲಂಚ ಪಡೆದ ಆರೋಪದ ಮೇಲೆ ಡಿಎಂಕೆ ನಾಯಕ ಹಾಗೂ ಶಾಲಾ ಶಿಕ್ಷಣ ಖಾತೆಯ ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರನ್ನು ಸೋಮವಾರ ಬಂಧಿಸಲಾಗಿದೆ.
ಅನ್ಬಿಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಗ್ರೇಟರ್ ಚೆನ್ನೈನ ಅಪರಾಧ ವಿಭಾಗದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಶಾಶ್ವತವಾಗಿ ಸರ್ಕಾರಿ ಮಾನ್ಯತೆ ನೀಡಲು 177 ಖಾಸಗಿ ಶಾಲೆಗಳಿಂದ ₹100 ಕೋಟಿ ಲಂಚ ಪಡೆದಿರುವ ಆರೋಪದ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.