
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಆಗಸ್ಟ್ 17ರಂದು 14 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟದ ವಿವರಗಳನ್ನು ಬಿಡುಗಡೆ ಮಾಡಲಾಗಿದೆ.
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಇಂದು 109.66 ಅಡಿ ನೀರು ಸಂಗ್ರಹವಾಗಿದೆ, ಹಾಗೆಯೇ ತುಂಗಭದ್ರಾ ಜಲಾಶಯದಲ್ಲಿ 1,629.54 ಅಡಿ ನೀರು ಸಂಗ್ರಹವಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವು ವಾಯುವ್ಯ ದಿಕ್ಕಿನತ್ತ ಚಲಿಸಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.