
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಮತ್ತು ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆಯನ್ನು ಸಿಐಡಿ ಬಂಧಿಸಿದೆ.
ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಅಭ್ಯರ್ಥಿಗಳಿಗೆ ತಲಾ 40 ಲಕ್ಷ ರೂಪಾಯಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಆತನನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯವು ಸೆಪ್ಟೆಂಬರ್ 9ರವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿದ್ದು, ಸಾಕ್ಷ್ಯ ನಾಶಕ್ಕಾಗಿ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿದ್ದ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.