
ಕರ್ನಾಟಕ ಕಾಂಗ್ರೆಸ್ ಸರ್ಕಾರವು ತುಳು ಭಾಷೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದೆ ಎಂದು ತಿಳಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಭಾಷೆಯ ಮಾನ್ಯತೆ ನೀಡಿರುವ ಬೆನ್ನಲ್ಲೇ, ಈ ನಿರ್ಧಾರದ ಕೀರ್ತಿ ಯಾರಿಗೆ ಸಲ್ಲಬೇಕು ಎಂಬ ಕುರಿತು ರಾಜಕೀಯ ನಾಯಕರ ನಡುವೆ ಕ್ರೆಡಿಟ್ ಚರ್ಚೆ ಜೋರಾಗಿದೆ.