
ಮಲೆ ಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಧಾಮವನ್ನಾಗಿಸುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದರೂ, ಸ್ಥಳೀಯರ ವಿರೋಧದಿಂದ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ.
ಯೋಜನೆ ಜಾರಿಯಾದಲ್ಲಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲಾಗುತ್ತದೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂಬುದು ಸ್ಥಳೀಯರ ಆತಂಕವಾಗಿದೆ.
ಈ ಯೋಜನೆ ಜಾರಿಯಾದರೆ ಎನ್ಟಿಸಿಎಯಿಂದ ವಾರ್ಷಿಕ 10 ಕೋಟಿ ರೂಪಾಯಿ ಅನುದಾನ ಸಿಗಲಿದ್ದು, ಕಳ್ಳಬೇಟೆ ತಡೆಗೆ ಕಾನೂನು ಬಿಗಿಯಾಗಲಿದೆ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.